Breaking News
recent

ಶಿವಣ್ಣ ಓಕೆ ಅಂದ್ರು ; ಮಧು ಬಂಗಾರಪ್ಪ ಬೇಡ ಅಂದ್ರು.!

ಅಕ್ಟೋಬರ್ 26 ರಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರ 83ನೇ ಜನ್ಮದಿನದ ಹಿನ್ನೆಲೆಯಲ್ಲಿ ಬಂಗಾರಪ್ಪ ಕುಟುಂಬದ ವತಿಯಿಂದ ವಿನೂತನ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ.
ವಿಶೇಷವಾಗಿ ನಾಳೆ ಸೊರಬದ ಮಾವಲಿ ಗ್ರಾಮದ ದೊಡ್ಡಕೆರೆಯ ಹೂಳೆತ್ತುವ ಕಾರ್ಯಕ್ರಮವನ್ನ ಬಂಗಾರಪ್ಪ ಕುಟುಂಬ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಕೂಲಿ ಕಾರ್ಮಿಕನಂತೆ ಮಧು ಬಂಗಾರಪ್ಪ ದುಡಿಯಲಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಇಚ್ಛೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೂ ಇತ್ತು. ಆದ್ರೆ, ಅವರ ಆರೋಗ್ಯದ ದೃಷ್ಟಿಯಿಂದ ಬೇಡ ಅಂತ ಖುದ್ದು ಮಧು ಬಂಗಾರಪ್ಪ ಹೇಳಿದ್ದಾರಂತೆ. [ಸೆಂಚುರಿ ಸ್ಟಾರ್ ಶಿವಣ್ಣನ ಅನಾರೋಗ್ಯಕ್ಕೆ ನಿಜವಾದ ಕಾರಣವೇನು?]
ಬಲ ಭುಜ ಭಾಗದಲ್ಲಿ ಅತಿಯಾದ ನೋವು ಕಾಣಿಸಿಕೊಂಡ ಕಾರಣ ಕೆಲ ದಿನಗಳ ಹಿಂದೆಯಷ್ಟೇ ಶಿವಣ್ಣ ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಹೂಳೆತ್ತುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬೇಡ ಅಂತ ಶಿವಣ್ಣನಿಗೆ ಮಧು ಬಂಗಾರಪ್ಪ ಸಲಹೆ ನೀಡಿದ್ದಾರೆ.
ಹೀಗಾಗಿ ಶಿವಣ್ಣನ ನಾಳಿನ ಸೊರಬ ಪ್ರೋಗ್ರಾಂ ಕ್ಯಾನ್ಸಲ್ ಆಗಿದೆ.
Fresh Kannada

Fresh Kannada

No comments:

Post a Comment

Google+ Followers

Powered by Blogger.