Breaking News
recent

ಇನ್ನು 3 ದಿನ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾದ ಕಾರಣ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದಲ್ಲಿ ಮತ್ತೆ ಮಳೆ ಶುರುವಾಗಿದೆ.
ಇನ್ನು 3 ದಿನ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಮಳೆ

ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಚೆನ್ನೈ, ತಿರುಚ್ಚಿ, ಕಾಂಚೀಪುರಂ, ತಿರುವಳ್ಳೂರು, ಪೆರಂಬಲೂರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ, ಚೆನ್ನೈನ ಹಲವು ಸಬ್‍ವೇಗಳನ್ನು ಬಂದ್ ಮಾಡಲಾಗಿದೆ.
Fresh Kannada

Fresh Kannada

No comments:

Post a Comment

Google+ Followers

Powered by Blogger.