Breaking News
recent

ಬಹುಭಾಷಾ ನಟ ವಿನೋದ್ ಆಳ್ವಾ ಪೊಲೀಸರ ವಶಕ್ಕೆ

ತನ್ನ ವ್ಯವಹಾರ ನೋಡುತ್ತಿದ್ದ ವ್ಯಕ್ತಿಯೊಬ್ಬರನ್ನು ಕೊಲ್ಲಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಬಹುಭಾಷಾ ನಟ ವಿನೋದ್ ಆಳ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಹುಭಾಷಾ ನಟ ವಿನೋದ್ ಆಳ್ವಾ ಪೊಲೀಸರ ವಶಕ್ಕೆ

ಪುತ್ತೂರು ತಾಲೂಕಿನ ಈಶ್ವರಮಂಗಲದ ಮನೆಯಲ್ಲಿದ್ದ ವಿನೋದ್ ಅಳ್ವಾರನ್ನು ಇಂದು ಬೆಳಗ್ಗೆ ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‍ಪಿ ಡಾ.ಶರಣಪ್ಪ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ವಿನೋದ್ ಆಳ್ವಾರ ವ್ಯವಹಾರವನ್ನು ಸಚ್ಚಿದಾನಂದ ಎಂಬವರು ನೋಡಿಕೊಳ್ಳುತ್ತಿದ್ದರು. ಆದರೆ ಸಚ್ಚಿದಾನಂದ ಅವರು ವಿನೋದ್ ಆಳ್ವಾ ಅವರು ನನ್ನನ್ನು ಕಾರು ಅಪಘಾತ ಮಾಡಿ ಕೊಲ್ಲಲು ಯತ್ನಿಸಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮತ್ತಷ್ಟು ಮಾಹಿತಿ ಅಪ್‍ಡೇಟ್ ಆಗಲಿದೆ
Fresh Kannada

Fresh Kannada

No comments:

Post a Comment

Google+ Followers

Powered by Blogger.