Breaking News
recent

'ಚಂದನವನದ ವರ್ಷದ ಹಾದಿ' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಬನ್ನಿ

ಕರ್ನಾಟಕ ಚಲನಚಿತ್ರ ಅಕಾಡೆಮಿ ನವೆಂಬರ್ 28 ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪಿ-2 ಸಭಾಂಗಣದಲ್ಲಿ 'ಚಂದನವನದ ವರ್ಷದ ಹಾದಿ ಪುಸ್ತಕ ಬಿಡುಗಡೆ ಹಾಗೂ ಚಲನಚಿತ್ರ ಅಕಾಡೆಮಿಯ ಅಂತರ್ಜಾಲ ಚಾಲನೆ ಸಮಾರಂಭವನ್ನು ಏರ್ಪಡಿಸಲಾಗಿದೆ.
'ಚಂದನವನದ ವರ್ಷದ ಹಾದಿ' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಬನ್ನಿ

ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ. ಎನ್.ಎಸ್. ಚನ್ನಪ್ಪಗೌಡ ಅವರು ಪುಸ್ತಕ ಬಿಡುಗಡೆ ಮಾಡಿ ಅಕಾಡೆಮಿಯ ಅಂತರ್ಜಾಲಕ್ಕೆ ಚಾಲನೆ ನೀಡಲಿದ್ದಾರೆ.

ಅಕಾಡೆಮಿಯ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರು ಸಮಾರಂಭ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ಅಕಾಡೆಯ ಅಧ್ಯಕ್ಷ ಟಿ.ಎಸ್. ನಾಗಾಭರಣ, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ತಾರಾ ಅನುರಾಧಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್. ಆರ್. ವಿಶುಕುಮಾರ್, ಚಂದನವನದ ಸಂಪಾದಕ ಮಂಡಳಿಯ ಸದಸ್ಯರಾದ ಶ್ಯಾಮಸುಂದರ ಕುಲಕರ್ಣಿ, ಚ.ಹ. ರಘುನಾಥ್, ಎನ್.ವಿಶಾಖ ಹಾಗೂ ಚೇತನ್ ನಾಡಿಗೇರ್ ಅವರು ಭಾಗವಹಿಸಲಿದ್ದಾರೆ. ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ಅವರು ತಿಳಿಸಿದ್ದಾರೆ.
Fresh Kannada

Fresh Kannada

No comments:

Post a Comment

Google+ Followers

Powered by Blogger.